ಬೆಂಗಳೂರು,ಮೇ 7(Daijiworld News/MSP): ಹಂಪಿ ಎಕ್ಸ್ಪ್ರೆಸ್ ರೈಲು ವಿಳಂಬದಿಂದಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಬರೆಯಲಾಗದ ಕರ್ನಾಟಕದ ನೂರಾರು ವಿದ್ಯಾರ್ಥಿಗಳಿಗೆ ಮೇ 20ರಂದು ಭಾನುವಾರ ಮತ್ತೊಮ್ಮೆ ಬರೆಯುವ ಅವಕಾಶ ಸಿಗಲಿದೆ
2019 ಮೇ, 5 ಭಾನುವಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅಗತ್ಯವಾಗಿರುವ ರಾಷ್ಟ್ರೀಯ ಅರ್ಹತಾ–ಪ್ರವೇಶ ಪರೀಕ್ಷೆ (ನೀಟ್) ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿತ್ತು. ಆದರೆ ಏಳು ಗಂಟೆ ವಿಳಂಬವಾಗಿ ತಲುಪಿದ ಹಂಪಿ ಎಕ್ಸ್ಪ್ರೆಸ್ ರೈಲು ಹಾಗೂ ಪರೀಕ್ಷಾ ಕೇಂದ್ರ ಬದಲಾವಣೆಯಿಂದಾಗಿ ನಗರದಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಲು ಹಲವಾರು ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲಿಲ್ಲ.
ಪರೀಕ್ಷೆ ವಂಚಿತರಿಗೆ ಮತ್ತೊಂದು ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಸದಾನಂದಗೌಡ, ರೈಲ್ವೆ ಇಲಾಖೆ ಹೀಗೆ ಕೇಂದ್ರವನ್ನು ಆಗ್ರಹಿಸಿದ್ದರು.
ಈ ಹಿನ್ನಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರು ಟ್ವೀಟ್ ಮಾಡಿದ್ದು ಮರು ಪರೀಕ್ಷೆ ಮೇ 20ರಂದು ನನಡೆಯಲಿದೆ ಎಂದಿದ್ದಾರೆ.