ಹುಬ್ಬಳ್ಳಿ, ಮೇ. 15(DaijiworldNews/AK): ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಿಂದ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಗಾಗಿ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವೀರಾಪುರ ಓಣಿಯ 21 ವರ್ಷ ಅಂಜಲಿ ಎಂಬ ಯುವತಿ ಅಂಜಲಿ ಎಂಬಾಕೆಯನ್ನು ವಿಶ್ವ ಅಲಿಯಾಸ್ ಗಿರೀಶ್ ಎಂಬ ಯುವಕ ಭೀಕರವಾಗಿ ಹತ್ಯೆ ಮಾಡಿದ್ದಾನೆ.