ನವದೆಹಲಿ, ಮೇ 07(Daijiworld News/SM): ಈ ಬಾರಿಯ ಲೋಕಸಭಾ ಸಮರದಲ್ಲಿ ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಷನ ನೀಡಿರುವ ಅವರು, ಕಳೆದ ಚುನಾವಣೆಯಲ್ಲಿ ಪಡೆದ ಸೀಟುಗಳಿಗಿಂತಲೂ ಹೆಚ್ಚು ಪ್ರಮಾಣದ ಸೀಟುಗಳನ್ನು ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಪಡೆದುಕೊಳ್ಳಲಿದೆ ಎಂದರು.
ಜನರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ತೃಪ್ತಿಪಡೆದುಕೊಂಡಿದ್ದಾರೆ. ಅವರ ಕುರಿತು ನಂಬಿಕೆ ಮತ್ತು ವಿಶ್ವಾಸ ಹೊಂದಿದ್ದಾರೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಮತದಾರರು ನಿರ್ಧರಿಸಿದ್ದು, ಈ ಉತ್ಸಾಹ ಎದ್ದು ಕಾಣುತ್ತಿದೆ ಎಂದರು.
ಇನ್ನು ಕಳೆದ ಕೇವಲ 5 ವರ್ಷದ ಅವಧಿಯಲ್ಲಿ ಮೋದಿ ಸರ್ಕಾರ ಎಲ್ಲ ವಲಯಗಳಲ್ಲಿಯೂ ಅಭಿವೃದ್ಧಿಯನ್ನು ಮಾಡುವ ಮೂಲಕ ಜನತೆಗೆ ಹತ್ತಿರವಾಗಿದೆ. ಮೋದಿ ಸರ್ಕಾರ ಬಂದ ಬಳಿಕ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳಾಗಿರುವುದನ್ನು ಜನರು ಕಂಡಿದ್ದು, ಇದುವೇ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಲು ಕಾರಣವಾಗಲಿದೆ ಎಂದರು.