ಬೆಂಗಳೂರು,ಮೇ. 17(DaijiworldNews/AK): ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮೂಲಕ ಬಿಡುಗಡೆಗೊಂಡ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾನೂನು ಬಿಟ್ಟು ನಾನೇನು ಮಾತನಾಡಲ್ಲ. ಕೈ ಮುಗಿಯುತ್ತೇನೆ ಬಿಟ್ಟು ಬಿಡಿ ಎಂದು ಹೇಳಿದರು.
ವಿಧಾನಸಭೆಯ ಕಾಗದ ಪತ್ರ ಸಮಿತಿ ಅಧ್ಯಕ್ಷರಾಗಿರುವ ಹೆಚ್.ಡಿ ರೇವಣ್ಣ ಅವರು ಇಂದು ಸಮಿತಿಯ ಸಭೆಗೆ ವಿಧಾನಸೌಧಕ್ಕೆ ಆಗಮಿಸಿದ್ರು.. ಈ ವೇಳೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಬಳಿಕ ರೇವಣ್ಣ, 15 ನಿಮಿಷಗಳಲ್ಲೇ ಕಾಗದ ಪತ್ರ ಸಮಿತಿ ಸಭೆ ಮುಗಿಸಿ ತೆರಳಿದರು.
ಸದ್ಯ ರೇವಣ್ಣ ಅವರನ್ನು ಕಾಗದ ಪತ್ರ ಸಮಿತಿ ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.