ಬೆಂಗಳೂರು ಮೇ 21(DaijiworldNews/AA): ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ನೀಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಆದ್ದರಿಂದ ಪ್ರತಿಕ್ರಿಯೆ ನೀಡುವಾಗ ಎಚ್ಚರ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಸಚಿವರಿಗೆ ಸೂಚನೆ ನೀಡುದ್ದಾರೆ.
ಪ್ರಸ್ತುತ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್ಐಟಿ ತನಿಖೆ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ಕುರಿತಂತೆ ಕೆಲ ಸಚಿವರು ನೀಡುವ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸುವ ಸಾಧ್ಯತೆ ಇದೆ. ಸಚಿವರುಗಳ ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೆಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ಅವರು ಸಚಿವರಿಗೆ ಈ ರೀತಿಯ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಸಿಎಂ ಸಿದ್ದರಾಮಯ್ಯ ನೀಡಿರುವ ಸಲಹೆಯನ್ನು ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ಉಳಿದ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.