ಉತ್ತರ ಪ್ರದೇಶ, ಮೇ 26 (DaijiworldNews/AA): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ. ಜೂನ್ 4ರಂದು ಬಿಜೆಪಿಗೆ ಅಂತಿಮ ಬೀಳ್ಕೊಡುಗೆ ನೀಡಲಾಗುತ್ತದೆ. ಆ ದಿನ ಹಲವು ಮಂದಿಗೆ ಸ್ವಾತಂತ್ರ್ಯದ ದಿನವಾಗಲಿದೆ ಎಂದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ಮಿತ್ರಪಕ್ಷವಾಗಿ, ನಾನು ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ವಾತಾವರಣವನ್ನು ಸೃಷ್ಟಿಸುವಲ್ಲಿ ನಿರತರಾಗಿದ್ದಾರೆ. ಹಿಂದುಳಿದ ದಲಿತ ಅಲ್ಪಸಂಖ್ಯಾತರು ಅಂದರೆ ಇಂಡಿಯಾ ಬಣ ಮತ್ತು ಎಸ್ಪಿಯ ಪಿಡಿಎ ಸೂತ್ರವು ಎನ್ಡಿಎಗಿಂತ ಮೇಲುಗೈ ಸಾಧಿಸಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯ ಸುಳ್ಳು ಅತಿಹೆಚ್ಚು ಕೆಲಸ ಮಾಡಿದೆ. ಎಲ್ಲಕ್ಕಿಂತ ಮಿಗಿಲಾಗಿ ಬಿಜೆಪಿಯ ಸಾಧನೆ ಶೂನ್ಯವಾಗಿದೆ. ಅವರಿಗೆ ರಾಜಕೀಯ ವಿಶ್ವಾಸಾರ್ಹತೆ ಉಳಿದಿಲ್ಲ. ಕಳೆದ 10 ವರ್ಷಗಳಲ್ಲಿ ಬಿಜೆಪಿ ಕೇಂದ್ರದಲ್ಲಿ ಸರ್ಕಾರ ನಡೆಸುತ್ತಿದೆ. ಉತ್ತರ ಪ್ರದೇಶದ 7 ವರ್ಷಗಳನ್ನು ಅದಕ್ಕೆ ಸೇರಿಸಿ, ಅವರು ನೀಡಿದ ಹೇಳಿಕೆಗಳು 17 ವರ್ಷಗಳಲ್ಲಿ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದರು.
ಇನ್ನು ಇಂಡಿಯಾ ಬಣ ಹಲವು ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡಿದ್ದು, ಕೆಲ ಪಕ್ಷಗಳು ಇತ್ತೀಚಿನ ದಿನಗಳಲ್ಲಿ ಇಂಡಿಯಾ ಮೈತ್ರಿಕೂಟವನ್ನು ತೊರೆದಿದೆ. ಈ ಅನುಭವಗಳು ಭವಿಷ್ಯದಲ್ಲಿ ನಮಗೆ ಮೈತ್ರಿಕೂಟವನ್ನು ಉತ್ತಮವಾಗಿ ನಿಭಾಯಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.