ದೆಹಲಿ, ಮೇ 26 (DaijiworldNews/AK): ಬಂಗಾಳ ಕೊಲ್ಲಿಯಲ್ಲಿ ಉಂಟಾಗುವ ರೆಮಲ್’ ಚಂಡಮಾರುತ ಇಂದು ಪಶ್ಚಿಮ ಬಂಗಾಳ ಸೇರಿ ಈಶಾನ್ಯ ರಾಜ್ಯಗಳ ಕರಾವಳಿ ತೀರಗಳಿಗೆ ಲಗ್ಗೆ ಇಡಲಿದೆ.
ಹೀಗಾಗಿ ರೆಮಲ್ ಸೈಕ್ಲೋನ್ ನಿಂದ ಮುನ್ನೆಚ್ಚರಿಕೆಯಾದ ಕ್ರಮಕೈಗೊಳ್ಳಲು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸಹ ರೆಮಲ್ ಚಂಡಮಾರುತದ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ರಕ್ಷಣಾ ಪಡೆ ಮಾಡಿಕೊಂಡಿರುವ ಸಿದ್ದತೆ ಬಗ್ಗೆ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ.ಈ ವೇಳೆ ಪ್ರಧಾನಿ ಮೋದಿ, ರಾಜ್ಯಗಳು, ಕೇಂದ್ರ ಸಚಿವಾಲಯಗಳು ರೆಮಲ್ ಚಂಡಮಾರುತವನ್ನು ಎದುರಿಸಲು ಯಾವೆಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು.
ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ವಿದ್ಯುತ್, ದೂರಸಂಪರ್ಕ, ಆರೋಗ್ಯ, ಕುಡಿಯುವ ನೀರು ಮುಂತಾದ ಎಲ್ಲಾ ಅಗತ್ಯ ಸೇವೆಗಳನ್ನು ಯಾವುದೇ ಅಡಚಣೆಯ ಸಂದರ್ಭದಲ್ಲಿ ತಕ್ಷಣವೇ ಜಾರಿಗೆ ಬರುತ್ತವೆ ಸೂಚನೆ ನೀಡಿದ್ದಾರೆ. ಅಗತ್ಯ ಔಷಧಗಳು ಸಂಗ್ರಹಣೆ ಸೇರಿದಂತೆ ನಿಯಂತ್ರಣ ಕೊಠಡಿಗಳು 24X7 ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದ್ದಾರೆ.ಇಂದು ಮಧ್ಯರಾತ್ರಿ ಕರಾವಳಿಗೆ ಅಪ್ಪಳಿಸಲಿರುವ ‘ರೆಮಲ್’ ಚಂಡಮಾರುತ, ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳ ಮಧ್ಯೆ ಹಾದುಹೋಗಲಿದೆ. ಗಂಟೆಗೆ 110ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ರೆಮಲ್ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೂ ಆಗಲಿದೆ. ಮೇ 30ರ ಬಳಿಕ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತದೆ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.