ಬೆಂಗಳೂರು, ಮೇ 29(DaijiworldNews/AA): ವಿಜಯೇಂದ್ರ ತಲೆಯಲ್ಲಿ ಕಂಟೆಂಟ್ ಇಲ್ಲ. ವಿಚಾರಗಳ ಮೇಲೆ ಮಾತನಾಡೋಕೆ ಆಗಲ್ಲ. ಅವರ ತಲೆಯಲ್ಲಿರೋದೆಲ್ಲ ಮುಗಿದು ಹೋಗಿರೋದ್ರಿಂದ ವೈಯುಕ್ತಿಕ ವಿಷಯ ಮಾತನಾಡುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಧು ಬಂಗಾರಪ್ಪ ಹೇರ್ಸೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇಶ್ಯೂ ಬಿಟ್ಟಿದ್ದಾರೆ. ವೈಯಕ್ತಿಕ ವಿಚಾರಗಳನ್ನು ಮಾತನಾಡುತ್ತಾರೆ. ಮಧುಬಂಗಾರಪ್ಪ ಹೇರ್ಸ್ಟೈಲ್ ಬಗ್ಗೆ ಮಾತನಾಡುತ್ತಾರೆ. ಹೇರ್ಸ್ಟೈಲ್ ಬಗ್ಗೆ ಮಾತನಾಡುತ್ತೀರಲ್ಲ ಸರಿನಾ? ನಿಮಗೆ ಜ್ಞಾನದ ಕೊರತೆ ಇರಬಹುದು. ಇಲ್ಲ ನಿಮಗೆ ಸಲಹೆ ಕೊಡುವುದು ತಪ್ಪಿರಬಹುದು ಎಂದು ಹೇಳಿದ್ದಾರೆ.
ಶಿವಮೊಗ್ಗ ಎಂದರೆ ಬಂಗಾರಪ್ಪ, ಯಡಿಯೂರಪ್ಪ ಇಬ್ಬರ ಹೆಸರು ಮುಖ್ಯವೇ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತಂದಿದ್ದಾರೆ. ಮಕ್ಕಳಿಗೆ ಮೂರು ಅವಕಾಶ ಕೊಟ್ಟಿದ್ದಾರೆ. ಆ ವಿಚಾರಗಳ ಬಗ್ಗೆ ನೀವು ಮಾತನಾಡಿ. ಅದು ಬಿಟ್ಟು ಹೇರ್ಸ್ಟೈಲ್ ಬಗ್ಗೆ ಮಾತನಾಡುತ್ತೀರಲ್ಲ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಈ ಕ್ಷೇತ್ರದಲ್ಲಿ ಸುಧಾಕರ್ ಅವರು ಒಂದೇ ಒಂದು ವೋಟು ಜಾಸ್ತಿ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಸವಾಲೆಸೆಗಿದ್ದಾರೆ.