ಮಧ್ಯಪ್ರದೇಶ, ಮೇ08(Daijiworld News/SS): ನರೇಂದ್ರ ಮೋದಿ ಸತ್ಯವನ್ನು ಎದುರಿಸಲಾರರು, ಅವರು ಪುನಃ ಪ್ರಧಾನಿಯಾಗುವುದಿಲ್ಲ ಎಂದು ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಹೇಳಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್, ಮೋದಿ ಸತ್ಯವನ್ನು ಎದುರಿಸಲಾರರು. ಅವರು ತಮ್ಮ ಆಶ್ವಾಸನೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ. ಮೋದಿ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ನರೇಂದ್ರ ಮೋದಿ ಅವರು ಈಗ ಏನೇ ಹೇಳಲಿ. ಜನರಿಗೆ ಅವರ ಮೇಲಿನ ವಿಶ್ವಾಸ ಹೊರಟು ಹೋಗಿದೆ. 2014ರ ಮಹಾ ಚುನಾವಣೆಯಲ್ಲಿ ಅವರು ಜನರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಮಧ್ಯ ಪ್ರದೇಶದಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಈಗಾಗಲೇ ಘಟಾನುಘಟಿ ನಾಯಕರು ಆಗಮಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.