ಬೆಂಗಳೂರು, ಮೇ 28 (DaijiworldNews/ AK):ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಅವರ ತಾಯಿ ಭವಾನಿ ಅವರನ್ನು ವಿಚಾರಣೆ ನಡೆಸಲು ಮುಂದಾಗಿರುವ ಎಸ್ಐಟಿ ನಡೆಯಲ್ಲಿ ದುರುದ್ದೇಶವಿದ್ದು, ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ಭವಾನಿ ರೇವಣ್ಣ ಪರ ಹಿರಿಯ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಬಂಧನ ಭೀತಿಯಿಂದ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಯನ್ನು, ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಭವಾನಿ ರೇವಣ್ಣ ಪರ ಹೈಕೋ ರ್ಟ್ನ ಹಿರಿಯ ವಕೀಲ ಸಂದೇಶ್ ಜೆ.ಚೌಟ ವಾದ ಮಂಡಿಸಿದರು. ಭವಾನಿ ವಿರುದ್ಧದ ಆರೋಪಗಳು ರಾಜಕೀಯ ಷಡ್ಯಂತ್ರ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ. ಆರೋಪಿಯು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ. ಆದ್ದರಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು. ಸುದೀರ್ಘ ವಾದ–ಪ್ರತಿವಾದ ಆಲಿಸಿದ ನ್ಯಾಯಪೀ ಠ ಆದೇಶವನ್ನು ಇದೇ 31ರಂದು ಪ್ರಕಟಿಸುವುದಾಗಿ ತಿಳಿಸಿದೆ.
ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋ ಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀ ಸ್ ಠಾಣೆಯಲ್ಲಿ ಐಪಿಸಿ ಕಲಂ 364ಎ, 365 ಮತ್ತು 34 ಅಡಿ
ಎಫ್ಐಆರ್ ದಾಖಲಿಸಲಾಗಿದೆ.