ಹಾಸನ, ಮೇ 29(DaijiworldNews/ AK):ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಇರುವ ಪೆನ್ಡ್ರೈವ್ ಹಂಚಿಕೆ ಆರೋಪದಡಿ ಮಂಗಳವಾರ ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ಗೌಡರನ್ನು ನ್ಯಾಯಾಲಯ ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿದೆ.
ಆರೋಪಿಗಳಿಬ್ಬರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಹಾಸನದ ಎರಡನೇ ಅಧಿಕ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಬುಧವಾರದಿಂದ ಜೂ.1ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶಿಸಿದರು.
ಜೂನ್ 1ರ ಶನಿವಾರ ಸಂಜೆ 4:30 ಕ್ಕೆ ಮತ್ತೆ ಕೋರ್ಟ್ಗೆ ಹಾಜರುಪಡಿಸಲು ತಿಳಿಸಲಾಗಿದೆ.