ಬೆಂಗಳೂರು, ಮೇ.31(DaijiworldNews/AA): ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಮುನ್ನಲೆಗೆ ಬಂದಿದೆ. ಹೀಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದ ಕುರಿತಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗುರುವಾರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ಪ್ರಸ್ತಾಪವಾಗಿದೆ. ಈ ವೇಳೆ ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಉತ್ತಮ. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತೀರ್ಮಾನ ಕೈಗೊಳ್ಳಲಾಯಿತು.
ಇನ್ನು ಸಭೆ ನಡೆದ ಬಳಿಕ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.