ಲಕ್ನೋ, ಜೂ 04(DaijiworldNews/MS): ಉತ್ತರ ಪ್ರದೇಶವನ್ನು ದೇಶದ ರಾಜಕೀಯ ರಾಜಧಾನಿ ಎಂದು ಕರೆಯಲಾಗುತ್ತದೆ. ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಉತ್ತರಪ್ರದೇಶ ಎಲ್ಲಾ ಪಕ್ಷಗಳಿಗೂ ನಿರ್ಣಾಯಕವಾಗಿರುತ್ತದೆ. ಹೀಗಾಗಿ ಉ.ಪ್ರ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಆದರೆ ಸದ್ಯದ ಅಂಕಿಅಂಶದ ಪ್ರಕಾರ 80 ಲೋಕಸಭಾ ಕ್ಷೇತ್ರಗಳ ಪೈಕಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ತೀವ್ರ ಹಿನ್ನಡೆ ಅನುಭವಿಸಿದ್ದು ಹೀಗಾಗಿ ಬಹುತೇಕ ಲೆಕ್ಕಾಚಾರ ಸದ್ಯದ ಮಟ್ಟಿಗೆ ತಲೆಕೆಳಗಾಗುವ ಸಾಧ್ಯತೆ ಇದೆ.
ಈಗಿನ ಟ್ರೆಂಡ್ ಪ್ರಕಾರ ಉತ್ತರಪ್ರದೇಶದಲ್ಲಿ ಎನ್ ಡಿಎ 36 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಮೈತ್ರಿಕೂಟ 45 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.