ಬೆಂಗಳೂರು, ಜೂ. 05(DaijiworldNews/AA): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.
ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನುಸಾರ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ಎಸ್ಐಟಿಯಿಂದ ಈ ಪ್ರಕರಣವ ಸಿಬಿಐಗೆ ವರ್ಗಾವಣೆ ಆಗುವ ಸಾಧ್ಯತೆಯಿದೆ. ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್ಐಟಿ ವರ್ಗಾವಣೆ ಮಾಡಲು ನಿರಾಕರಿಸಿದರೆ ಸಿಬಿಐ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ.