ಬೆಂಗಳೂರು, ಜೂ 06 (DaijiworldNews/MS): ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಲಿದ್ದಾರೆ.
ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನೀಡಿದ “ಭ್ರಷ್ಟಾಚಾರ ದರ ಕಾರ್ಡ್ - 40 ಪರ್ಸೆಂಟ್ ಕಮಿಷನ್” ಜಾಹೀರಾತಗಳನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.
ಈ ಪ್ರಕರಣದ ವಿಚಾರಣೆಗಾಗಿ ನಾಳೆ ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಜೂನ್ 1ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಜೂ.1ರಂದು ಜಾಮೀನು ಮಂಜೂರು ಮಾಡಿದ್ದ ವಿಶೇಷ ನ್ಯಾಯಾಲಯವು ಜೂನ್ 7 ರಂದು ರಾಹುಲ್ ಗಾಂಧಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು. ರಾಹುಲ್ ಗಾಂಧಿ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ.