ನವದೆಹಲಿ, ಜೂ. 07(DaijiworldNews/AK):ಸಂಸತ್ ಭವನದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್ ಕೋರ್ಟ್ಗೆ 1,000 ಪುಟಗಳ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
2023 ರ ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರ ವಿಶೇಷ ತಂಡವು ಶುಕ್ರವಾರ ತನ್ನ ಮೊದಲ ಚಾರ್ಜ್ಶೀಟ್ ಅನ್ನು ಇಲ್ಲಿನ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಆರೋಪಿಗಳಾದ ಡಿ.ಮನರಂಜನ್, ಲಲಿತಾ ಝಾ, ಅಮೋಲ್ ಶಿಂಧೆ, ಮಹೇಶ್ ಕುಮವತ್, ಸಾಗರ್ ಶರ್ಮಾ, ನೀಲಂ ಅಜಾದ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ.ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮೇ 24 ರಂದು ನ್ಯಾಯಾಲಯವು ತನಿಖೆಯನ್ನು ಪೂರ್ಣಗೊಳಿಸಲು ಪೊಲೀಸರಿಗೆ 13 ದಿನಗಳ ಕಾಲಾವಕಾಶವನ್ನು ನೀಡಿತ್ತು. 1,000 ಪುಟಗಳ ಚಾರ್ಜ್ಶೀಟ್ ಅನ್ನು ಪಟಿಯಾಲ ಹೌಸ್ ಕೋರ್ಟ್ನಲ್ಲಿ ಸಲ್ಲಿಸಲಾಗಿದೆ.
ಪಾರ್ಲಿಮೆಂಟ್ಗೆ ಎಂಟ್ರಿ ಕೊಟ್ಟಿದ್ದ ಕೆಲವರು ಒಳಗಡೆ ನುಗ್ಗಿ ಭದ್ರತಾ ನಿಯಮ ಉಲ್ಲಂಗಿದ್ದರು. ಸಂಸತ್ ಒಳಗೆ ಸ್ಮೋಕ್ ಬಾಂಬ್ ಸಿಡಿಸಿ ಗದ್ದಲ ಸೃಷ್ಟಿಸಿದ್ದರು. ಒಳಗಿದ್ದ ಸಂಸದರು ಭಯಭೀತರಾಗಿದ್ದರು.