ಬೆಂಗಳೂರು, ಜೂ. 08(DaijiworldNews/AA): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬ್ಯಾಂಕ್ ಸಿಬ್ಬಂದಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಯೂನಿಯನ್ ಬ್ಯಾಂಕ್ನ ಮ್ಯಾನೇಜರ್ ಸುಚಿಸ್ಮಿತ ರೌಲ್, ಬ್ಯಾಂಕ್ ಬ್ರ್ಯಾಂಚ್ ಹೆಡ್ ದೀಪಾ ಎಸ್, ಕೃಷ್ಣಮೂರ್ತಿಗೆ ಎಸ್ಐಟಿ ನೋಟಿಸ್ ನೀಡಿದೆ. ಜೊತೆಗೆ ತುರ್ತಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ.
ಸಿಬಿಐ ಬಳಿಕ ಇದೀಗ ಇ.ಡಿ ಈ ಪ್ರಕರಣಕ್ಕೆ ಎಂಟ್ರಿ ನೀಡಿದ್ದು, ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಮಾಹಿತಿ ಪಡೆದಿದೆ. ಹಣ ಅಕ್ರಮ ವರ್ಗಾವಣೆ ನಡೆದಿರುವ ಶಂಕೆ ಹಿನ್ನೆಲೆ ಸಿಬಿಐ ಬಳಿ ಇ.ಡಿ ಅಧಿಕಾರಿಗಳು ಮಾಹಿತಿ ಪಡೆದಿದ್ದು, ಸಿಬಿಐ ಬಳಿ ಎಫ್ಐಆರ್ ಬಗೆಗಿನ ಮಾಹಿತಿ ಪಡೆದುಕೊಂಡಿದೆ.
ಸಿಬಿಐ ಬಳಿಕ ಇದೀಗ ಇ.ಡಿ ಎಫ್ಐಆರ್ ದಾಖಲಿಸುವ ಸಾಧ್ಯತೆಯಿದ್ದು, ಮುಂದಿನ ವಾರ ಎಫ್ಐಆರ್ ದಾಖಲಿಸಿಲು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯೂನಿಯನ್ ಬ್ಯಾಂಕ್ ತನ್ನ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿದೆ.