ರಾಯ್ ಬರೇಲಿ, ಜೂ. 11(DaijiworldNews/AA): ಪ್ರಿಯಾಂಕಾ ಗಾಂಧಿ ವಾರಾಣಸಿಯಲ್ಲಿ ಸ್ಪರ್ಧಿಸಿದ್ದರೆ ಅವರು ಪ್ರಧಾನಿ ಮೋದಿಯನ್ನು 2 ಅಥವಾ 3 ಲಕ್ಷ ಮತಗಳಿಂದ ಸೋಲಿಸುತ್ತಿದ್ದರು ಎಂದು ರಾಹುಲ್ ಗಾಂಧಿ ಅವರು ಸಹೋದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಮೇಥಿ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಇಂದು ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಗೆಲುವು ಐತಿಹಾಸಿಕವಾದುದು. ತಾನು ಮತ್ತು ಪಕ್ಷದ ಇತರ ಸಂಸದರು ಚುನಾವಣಾ ಫಲಿತಾಂಶದ ಬಗ್ಗೆ ಅಹಂಕಾರ ಪಡುವುದಿಲ್ಲ. ಜನಸಾಮಾನ್ಯರ ಉದ್ದೇಶಕ್ಕಾಗಿ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.
ಅಯೋಧ್ಯೆಯಲ್ಲಿ ಬಿಜೆಪಿ ಸೋಲನ್ನು ಅನುಭವಿಸಿದ ಬಗ್ಗೆ ಮಾತನಾಡಿದ ಅವರು, ರಾಹುಲ್ ಗಾಂಧಿ, ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಜನರನ್ನು ಕಡೆಗಣಿಸಿದ್ದಾರೆ. ಕೈಗಾರಿಕೋದ್ಯಮಿಗಳು ಮತ್ತು ಇತರ ವ್ಯಕ್ತಿಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ. ಹೀಗಾಗಿ ಜನಸಾಮಾನ್ಯರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.