ಬೆಂಗಳೂರು, ಜೂ. 12(DaijiworldNews/AK): ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈಗಾಗಲೇ ಎರಡು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣರನ್ನ ವಶಕ್ಕೆ ಪಡೆದು ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಇದೀಗ 3ನೇ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ.
ಇತ್ತೀಚೆಗಷ್ಟೇ ಲೈಂಗಿಕ ಕಿರುಕುಳ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಬುಧವಾರ ಸೈಬರ್ ಅಪರಾಧ ಠಾಣೆ ವಶಕ್ಕೆ ಪಡೆದಿದ್ದ ಎಸ್ಐಟಿ ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಈ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, 6 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.