ಬೆಳಗಾವಿ, ಜೂ 13 (DaijiworldNews/ AK): ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಯೋ ಜನೆ ಫಲ ಕೊಡಲಿಲ್ಲ ಎಂಬುದು ಕಾಂಗ್ರೆಸ್ ಶಾಸಕರಿಗೆ ಖಾತ್ರಿಯಾಗಿದೆ. ಈ ಯೋಜನೆಗಳ ಕುರಿತು ಸ್ವತಃ ಅವರಿಗೇ ಸಮಾಧಾನವಿಲ್ಲ ಎಂದು ಬೆಳಗಾವಿ ಕ್ಷೇ ತ್ರದ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗೋ ಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೇ ಹೇಳಬಹುದು. ಆದರೆ, ಗ್ಯಾರಂಟಿ ಯೋ ಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂ ಡಿದ್ದು,ಯಾವ ಕಾಮಗಾರಿಗೂ ಅನುದಾನ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೇ ಈ ಬಾರಿಯ ಲೋ ಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸದಂತೆ ಆ ಪಕ್ಷದ ಶಾಸಕರೇ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ ಎಂದರು.