ಶ್ರೀನಗರ, ಜೂ 13 (DaijiworldNews/ AK): ಜಮ್ಮು ಮತ್ತು ಕಾಶ್ಮೀರ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಇಲ್ಲಿನ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳನ್ನೂ ಬೆಳಗ್ಗೆ ರಾಷ್ಟ್ರಗೀತೆಯೊಂದಿಗೆ ಪ್ರಾರಂಭಿಸುವಂತೆ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಗದಿಪಡಿಸಬೇಕು. ಇದು ವಿದ್ಯಾರ್ಥಿಗಳಲ್ಲಿ ಏಕತೆ ಮತ್ತು ಶಿಸ್ತಿನ ಭಾವನೆ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಈ ಮೂಲಕ ಸಮಗ್ರತೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸಲು ಶಾಲೆಯ ಬೆಳಗ್ಗಿನ ವೇದಿಕೆ ಸಹಕಾರಿಯಾಗಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.
ಕೆಲವು ಶಾಲೆಗಳಲ್ಲಿ ಈಗಾಗಲೇ ಈ ನಿಯಮ ಪಾಲನೆಯಾಗುತ್ತಿದೆ. ಇನ್ನೂ ಕೆಲವು ಶಾಲೆಗಳಲ್ಲಿ ಅಂತಹ ಮಹತ್ವದ ಆಚರಣೆಯನ್ನು ಏಕರೂಪವಾಗಿ ಪಾಲಿಸುತ್ತಿಲ್ಲ ಎಂಬುದು ತಿಳಿದು ಬಂದಿದೆ.