ಚಿತ್ರದುರ್ಗ, ಜೂ. 16(DaijiworldNews/AA): ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ ೮ನೇ ಆರೋಪಿ ರವಿಶಂಕರ್ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿಶಂಕರ್ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಆತನ ಕಾರನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ರವಿಶಂಕರ್ ರೇಣುಕಾ ಸ್ವಾಮಿ ಕೊಲೆ ನಡೆದ ಬಳಿಕ ನಟ ದರ್ಶನ್ ಹಾಗೂ ಗ್ಯಾಂಗ್ನಿಂದ 5 ಲಕ್ಷ ರೂಪಾಯಿ ಪಡೆದಿದ್ದಾನೆ ಎನ್ನಲಾಗಿದೆ. ರವಿಶಂಕರ್ ಮನೆಯಲ್ಲಿ ಪೊಲೀಸರು ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದು, ಆರೋಪಿಯ ಮನೆಯಲ್ಲಿ ವಿಚಾರಣೆ ತೀವ್ರಗೊಂಡಿದೆ. ಈ ವಿಚಾರಣೆಯು ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ನಡೆದಿದ್ದು, ರವಿಶಂಕರ್ ಕುಟುಂಬಸ್ಥರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದೆ.
ಜೂನ್ 8ರಂದು ರೇಣುಕಾಸ್ವಾಮಿ ಅಪಹರಣಕ್ಕೆ ರವಿಶಂಕರ್ ಕಾರು ಬಳಕೆ ಮಾಡಲಾಗಿತ್ತು. ಇನ್ನು ಜೂನ್ 9ರಂದು ಆರೋಪಿಗಳು ಅದೇ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಸ್ ಬಂದಿದ್ದರು ಎನ್ನಲಾಗಿದೆ.