ನವದೆಹಲಿ, ಜೂ. 17(DaijiworldNews/AK): ಲೋಕಸಭಾ ಚುನಾವಣೆ ನಡೆದು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರಚನೆಯಾಗಿದೆ. ನರೇಂದ್ರ ಮೋದಿ ಅವರುಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕನ ಸ್ಥಾನಕ್ಕೇರಲಿದ್ದಾರೆ ಎನ್ನಲಾಗಿತ್ತು.
ಆದರೆ ರಾಹುಲ್ ಈ ಹುದ್ದೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ತಿಳಿದು ಬಂದಿದೆ.ದಶಕದ ಬಳಿಕ ಕಾಂಗ್ರೆಸ್ ಲೋಕಸಭೆಯಲ್ಲಿ ವಿಪಕ್ಷದ ಸ್ಥಾನ ಪಡೆದಿದ್ದು, ಇದರಿಂದ ಉತ್ತಮ ನಾಯಕನನ್ನು ವಿಪಕ್ಷ ನಾಯಕರನ್ನಾಗಿಮಾಡಲು ಕಾಂಗ್ರೆಸ್ ಮುಂದಾಗಿದೆ.
ರಾಹುಲ್ ಗಾಂಧಿ ಅವರು ಬೇಡ ಎಂದ ಕಾರಣದಿಂದ ಮೂವರು ಹಿರಿಯ ನಾಯಕರಾದ ಕುಮಾರಿ ಸೆಲ್ಜಾ, ಗೌರವ್ ಗೊಗೊಯ್ ಮತ್ತು ಮನೀಶ್ ತಿವಾರಿ ಅವರನ್ನು ಪರಿಗಣಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.