ಬೆಂಗಳೂರು, ಜೂ. 18(DaijiworldNews/AK): ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಿಸಲು ಸರ್ಕಾರ ನಿರ್ಧಾರಿಸಿದೆ. ಅಲ್ಲದೇ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿಆಚರಿಸಲು ನಿರ್ಧರಿಸಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ.ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಇಂದು ನಡೆಯಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಾಡ ಪ್ರಭು ಕೆಂಪೇಗೌಡರ ಜಯಂತಿ ಆಚರಣೆಯನ್ನು ಕುರಿತು ಅಧಿಕಾರಿಳಿಗೆ ಸಲಹೆ ಸೂಚನೆಗಳನ್ನು ನೀಡಿ, ಕೆಂಪೇಗೌರ ದೂರ ದೃಷ್ಟಿ, ಅವರ ನಿಲುವು, ಸಂಸ್ಕೃತಿಯ ಬಗ್ಗೆ ಮುಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸಿ ಕೊಡುವುದು ನಮ್ಮ ಕರ್ತವ್ಯವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವಿಚಾರ ಸಂಕೀರ್ಣಗಳನ್ನು ನಡೆಸಲು 1 ಲಕ್ಷ ರೂಪಾಯಿಗಳನ್ನು ಮೀಸಲಿಡಲಾಗುವುದು ಎಂದು ಹೇಳಿದರು.
ಕೆಂಪೇಗೌಡರ ಜಯಂತಿಯನ್ನು ಕೇವಲ ಒಂದು ವರ್ಗಕ್ಕೆ ಸೀಮಿತವಾಗಿ ಆಚರಿಸದೆ, ಜ್ಯಾತ್ಯಾತೀತ ವರ್ಗಗಳ ನಾಯಕರಾದ ಅವರ ಜಯಂತಿಯನ್ನು ಇಡೀ ಕರ್ನಾಟಕದ ಜನತೆ ಒಟ್ಟಾಗಿ ಆಚರಿಸಬೇಕು ಎಂದು ಕರೆ ನೀಡಿದರು.