ನವದೆಹಲಿ, ಜೂ.25(DaijiworldNews/AK) :ತುರ್ತು ಪರಿಸ್ಥಿತಿʼಯು ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. 1975ರ ಜೂನ್ 25ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹಮದ್ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರ ಸಲಹೆ ಮೇರೆಗೆ ಈ ಕ್ರಮ ತೆಗೆದುಕೊಂಡಿದ್ದರು. ತುರ್ತು ಪರಿಸ್ಥಿತಿ ಜಾರಿಯಾಗಿ ಜೂನ್ 25ಕ್ಕೆ 49 ವರ್ಷ ತುಂಬಿದ್ದು, 50ನೇ ವರ್ಷ ಆರಂಭವಾಗಲಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನೆದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲ್ಲದೇ ಕಾಂಗ್ರೆಸ್ ವಿರುದ್ಧವೂ ಕಿಡಿ ಕಾರಿದ್ದಾರೆ.
ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಮಹಾಪುರುಷರಿಗೆ ಮತ್ತು ಮಹಿಳೆಯರಿಗೆ ಗೌರವ ಸಲ್ಲಿಸುವ ದಿನವಾಗಿದೆ. ತುರ್ತು ಪರಿಸ್ಥಿತಿಯಿಂದ ಕಾಂಗ್ರೆಸ್ ಪಕ್ಷವು ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಬುಡಮೇಲು ಮಾಡಿತ್ತು? ಹಾಗೂ ಪ್ರತಿಯೊಬ್ಬ ಭಾರತೀಯರು ಗೌರವಿಸುವ ಸಂವಿಧಾನವನ್ನು ಹೇಗೆ ತುಳಿಯಿತು? ಎಂಬುದನ್ನು ನಮಗೆ ನೆನಪಿಸುತ್ತದೆ ಎಂದರು
ಅಸಂಖ್ಯಾತ ಸಂದರ್ಭಗಳಲ್ಲಿ 356ನೇ ವಿಧಿಯನ್ನು ಹೇರಿದವರು,ತುರ್ತು ಪರಿಸ್ಥಿತಿಯನ್ನು ಹೇರಲು ಕಾರಣವಾದ ಮನಸ್ಥಿತಿಯು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಜೀವಂತವಾಗಿದೆ. ಅವರು ತಮ್ಮ ಟೋಕನಿಸಂ ಮೂಲಕ ಸಂವಿಧಾನದ ಬಗ್ಗೆ ತಮ್ಮ ತಿರಸ್ಕಾರ ಮನೋಭಾವವನ್ನು ಮರೆಮಾಚುತ್ತಾರೆ. ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವ ಹಕ್ಕು ಇಲ್ಲ. ಆದ್ರೆ ದೇಶದ ಜನರು ಅವರ ಭಾವನೆಗಳನ್ನು ವರ್ತನೆಗಳ ಮೂಲಕ ನೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.