ನವದೆಹಲಿ, ಜೂ.25(DaijiworldNews/AA): ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಇಂದು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ 'ಜೈ ಪ್ಯಾಲೆಸ್ತೀನ್' ಎಂದು ಘೋಷಣೆ ಕೂಗಿದ್ದಾರೆ.
ಓವೈಸಿ ಅವರು ಪ್ರಮಾಣ ವಚನದ ಕೊನೆಯಲ್ಲಿ 'ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್' ಎಂದು ಘೋಷಣೆ ಕೂಗಿದ್ದಾರೆ. ಇದೀಗ ಓವೈಸಿ ಅವರು ಈ ರೀತಿಯಾಗಿ ಘೋಷಣೆ ಕೂಗುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಓವೈಸಿ ಈ ರೀತಿಯಾಗಿ ಘೋಷಣೆ ಕೂಗಿದ ಕೂಡಲೇ ಆಡಳಿತ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆ ಪದವನ್ನು ಕಡತದಿಂದ ತೆಗೆದು ಹಾಕುವಂತೆ ಆಗ್ರಹಿಸಿದ್ದಾರೆ. ಈ ಮನವಿಯನ್ನು ಪುರಸ್ಕರಿಸಿದ ಸ್ಪೀಕರ್ ಓವೈಸಿ ಹೇಳಿದ ಪದಗಳನ್ನು ಕಡತದಿಂದ ತೆಗೆದು ಹಾಕುವಂತೆ ನಿರ್ದೇಶಿಸಿದ್ದಾರೆ.