ನವದೆಹಲಿ, ಜೂ 27 (DaijiworldNews/ AK): ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಪಾಟ್ನಾದ ಮನೀಶ್ ಕುಮಾರ್ ಮತ್ತು ಅಶುತೋಷ್ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶ್ ಕುಮಾರ್ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. ಅಶುತೋಷ್ ವಿದ್ಯಾರ್ಥಿಗಳಿಗೆ ವಸತಿ ಒದಗಿಸಿದ್ದಾನೆ.
ಗುರುವಾರ ಇಬ್ಬರನ್ನು ವಿಚಾರಣೆಗಾಗಿ ಸಿಬಿಐ ಕರೆದಿತ್ತು. ವಿಚಾರಣೆಯ ಬಳಿಕ ಇಬ್ಬರ ಬಂಧನ ನಡೆದಿದೆ. ಇಬ್ಬರನ್ನು ಬಂಧನ ಮಾಡುವ ಮೊದಲು ಬಿಹಾರ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪರೀಕ್ಷೆಗೆ ಒಂದು ದಿನ ಮುಂಚಿತವಾಗಿ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ತಾನು ಮತ್ತು ಇತರ ಕೆಲವರು ಪಡೆದುಕೊಂಡಿದ್ದೇವೆ ಎಂದು ಹೇಳಿದ ಅಭ್ಯರ್ಥಿಯನ್ನು ವಿಚಾರಣೆ ನಡೆಸಿದ್ದಾರೆ.