ಬೆಂಗಳೂರು, ಜೂ 27 (DaijiworldNews/ AK): ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಸಿಐಡಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಇದರ ನಡುವೆಯೇ ಇದೀಗ ಕೋರ್ಟ್ ಬಿ.ಎಸ್. ಯಡಿಯೂರಪ್ಪ ಅವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿದೆ. ಇಂದು ಜೂನ್ 28 ರಂದು ಕರ್ನಾಟಕ ಹೈಕೋರ್ಟ್ಯಡಿಯೂರಪ್ಪನವರ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಎಸ್ಪಿಪಿಗೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.
ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಜಾಮೀನು ವಿಸ್ತರಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ದ ಯಡಿಯೂರಪ್ಪಗೆ ರಿಲೀಫ್ ಸಿಕ್ಕಿದೆ . ಇನ್ನು ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಜೂನ್ 27 ಪೊಲೀಸರು, ಬೆಂಗಳೂರಿನ ಪೋಕ್ಸೋ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಮಾರ್ಚ್ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. . ಫೆ. 2ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಹೀಗಾಗಿ ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು.