ನವದೆಹಲಿ, ಜೂ 29 (DaijiworldNews/ AK): ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚ ನಾಯಕ ಹೇಮಂತ್ ಸೊರೇನ್ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ಜಾಮೀನು ಪಡೆದ ನಂತರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಸೊರೇನ್ , ನನ್ನನ್ನು 5 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು. ನ್ಯಾಯಾಂಗ ಪ್ರಕ್ರಿಯೆಯು ಕೇವಲ ದಿನಗಳು ಅಥವಾ ತಿಂಗಳುಗಳಲ್ಲ ಹೇಗೆ ವರ್ಷಗಳನ್ನು ತೆಗೆದುಕೊಳ್ಳುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ ಎಂದರು.
ಇದು ನಮ್ಮ ವಿರುದ್ಧ ಹೇಗೆ ಸಂಚು ರೂಪಿಸಲಾಯಿತು ಎಂಬುದು ಇಡೀ ದೇಶಕ್ಕೆ ಸಂದೇಶವಾಗಿದೆ. ನಾವು ಪ್ರಾರಂಭಿಸಿದ ಹೋರಾಟ ಮತ್ತು ನಾವು ಮಾಡಿದ ನಿರ್ಣಯಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತೇವೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿ ಸೊರೇನ್ ಹೇಳಿದ್ದಾರೆ.
ನ್ಯಾಯಾಲಯವು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ ಎರಡು ವಾರಗಳ ನಂತರ ನ್ಯಾಯಾಲಯವು ಪ್ರಕರಣದಲ್ಲಿ ಸೊರೇನ್ ಅವರಿಗೆ ಜಾಮೀನು ನೀಡಿತು.