ಬೆಂಗಳೂರು, ಜು.01(DaijiworldNews/AA): ಸಿಎಂ ಹಾಗೂ ಡಿಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿಎಂ, ಡಿಸಿಎಂ ಹುದ್ದೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹಾಗೂ ಡಿಸಿಎಂ ಹುದ್ದೆಯ ವಿಷಯ ಸಾರ್ವಜನಿಕವಾಗಿ ಚರ್ಚೆ ಮಾಡುವಂತಹದ್ದಲ್ಲ. ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಈ ಬಗ್ಗೆ ಎಲ್ಲಾ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.
ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದರಂತೆ ನಾವು ನಡೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.