ಶ್ರೀನಗರ, ಜು.02(DaijiworldNews/AK): ಲಡಾಖ್ನಲ್ಲಿ ಇಂದು (ಬುಧವಾರ) ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀ ಯ ಭೂಕಂಪ ವಿಜ್ಞಾನ ಕೇಂದ್ರ ತಿಳಿಸಿದೆ.
ಭೂಕಂಪನದ ಕೇಂದ್ರ ಬಿಂದು ಲೇಹ್ ಆಗಿದ್ದು, 150 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ. ಇಂದು ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಭೂಕಂಪ ಸಂಭವಿಸಿದೆ.ಜೂನ್ 28ರಂದು ಅಂಡಮಾನ್ ಸಮುದ್ರದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿತ್ತು.