ಬೆಂಗಳೂರು, ಜು. 09(DaijiworldNews/AK): ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದಲ್ಲಿ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು ನಿಜ ಎಂದು ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.
ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಡಿಯೋ ವೈರಲ್ ಆದ ಬೆನ್ನಲ್ಲೇ ಆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ಅಧಿಕಾರವವನ್ನು ದುರ್ಬಳಕೆ ಮಾಡಿಕೊಂಡಿರುವುದು ನಿಜ. ಹಾಗೆಂದು ಪ್ರಕರಣದಲ್ಲಿ ನಮ್ಮ ಸಚಿವರು, ಶಾಸಕರು ಯಾರೂ ಶಾಮೀಲಾಗಿಲ್ಲ ಎಂದರು.
ಈಗಾಗಲೇ ಸಿಐಡಿ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ತನಿಖೆ ನಡೆಸಲು ಸಿಐಡಿ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ನೀಡಿದ್ದೇವೆ. ಪ್ರಕರಣ ಸಂಬಂಧ ಮಂತ್ರಿಯಿಂದ ರಾಜೀನಾಮೆ ಪಡೆದಿದ್ದೇವೆ. ತನಿಖೆಗೆ ಸಹಕಾರ ನೀಡುವುದಾಗಿ ಹೇಳಿ ರಾಜೀನಾಮೆ ನೀಡಿದ್ದಾರೆ ಎಂದರು.
ಅಧಿಕಾರಿಗಳು ಶಾಮೀಲಾಗಿರುವುದು ಗೊತ್ತಾಗಿದೆ. ಆದರೆ ಅಧಿಕಾರಿಗಳ ಆಡಿಯೋ ವಿಡಿಯೋ ಬಗ್ಗೆ ಗೊತ್ತಿಲ್ಲ ಎಂದು ಉತ್ತರಿಸಿದರು.
‘