ಶ್ರೀನಗರ,ಮೇ16(DaijiworldNews/AZM):ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಸಿಆರ್ಪಿಎಫ್, ರಾಷ್ಟ್ರೀಯ ರೈಫಲ್ಸ್ ಹಾಗೂ ವಿಶೇಷ ಕಾರ್ಯಾಚರಣೆ ತಂಡಗಳು ನಡೆಸುತ್ತಿದ್ದ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ತಕ್ಕ ಉತ್ತರ ನೀಡಿದ್ದು, ದಲಿಪೊರಾದ ಮನೆಯೊಂದರಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಇನ್ನೂ ಇಬ್ಬರು ಯೋಧರು ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಅಡಗಿರುವ ಮತ್ತಷ್ಟು ಉಗ್ರರನ್ನು ಹೊರಗೆಳೆಯಲು ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.