ಬೆಂಗಳೂರು, ಜು. 15(DaijiworldNews/AK): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಸಚಿವ ಸಂಪುಟದ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ, ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.