ಬೆಂಗಳೂರು, ಜು. 17(DaijiworldNews/AK): ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರ ಗೋಚರತೆ ತೀರಾ ಕಡಿಮೆ ಆಗಿದ್ದು, ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರತಿ ಬೆಳಿಗ್ಗೆ 9ರಿಂದ 11ರ ವರೆಗೆ ಹಾಗೂ ಸಂಜೆ 6ರಿಂದ ರಾತ್ರಿ 9ರ ವರೆಗೆ ಪೊಲೀಸ್ ಸಮವಸ್ತ್ರದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಗಸ್ತು ನಡೆಸಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದಾರೆ.
ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಬೆಂಗಳೂರು ಸೇರಿದಂತೆ ಇತರ ನಗರಗಳ ಪೊಲೀಸ್ ಕಮಿಷನರೇಟ್ಗಳ ವ್ಯಾಪ್ತಿಗೆ ಬರುವ ಡಿಸಿಪಿಗಳು ಪ್ರತಿದಿನ ಕನಿಷ್ಠ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಎಂದು ಸೂಚಿಸಿದ್ಧಾರೆ.
ಅಲ್ಲದೇ ಎಲ್ಲ ವಲಯದ ಐಜಿಪಿಗಳು, ಡಿಐಜಿಪಿಗಳು ಹಾಗೂ ಹೆಚ್ಚುವರಿ ಪೊಲೀ ಸ್ ಆಯುಕ್ತರೂ ತಮ್ಮ ವ್ಯಾಪ್ತಿಯ ಠಾಣೆಗಳಿಗೆ ಭೇಟಿ ನೀಡಬೇ ಕು. ಭೇಟಿ ಸಂದರ್ಭ ದಲ್ಲಿ ಕಾರ್ಯ ನಿರ್ವಹಣೆ ಪರಿಶೀಲಿಸಬೇಕು. ಅಲ್ಲದೇ ಪ್ರಮುಖ ಅಪರಾಧ ಪ್ರಕರಣಗಳು ನಡೆದಾಗ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಸೂಚಿಸಿದ್ದಾರೆ.
ಕ್ಲಬ್ ಗಳು, ಜೂಜು, ಮಟ್ಕಾ ಸೇರಿದಂತೆ ಎಲ್ಲ ಸಂಘಟಿತ ಅಪರಾಧಗಳನ್ನು ತಕ್ಷಣವೇ ನಿಲ್ಲಿಸಬೇಕು. ಆರೋ ಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆದೇಶಿಸಿದ್ದಾರೆ.ಡ್ರಗ್ಸ್ ಹಾಗೂ ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಶಾಲಾ, ಕಾಲೇಜುಗಳಿಗೆ ಭೇ ಟಿ ನೀಡಬೇಕು. ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂ ದಿಗಳು ಇ-ಬೀಟ್ ಅಪ್ಲಿಕೇಶನ್ ಸಂಪೂರ್ಣ ನಿರ್ವಹಣೆ ತಿಳಿದಿರಬೇಕು. ಇ–ಬೀ ಟ್ ಸೇ ವೆ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.