ಲಖನೌ, ಜು.22(DaijiworldNews/AA): ಕನ್ವರ್ ಯಾತ್ರೆ ಮಾರ್ಗದಲ್ಲಿನ ತಿಂಡಿ-ತಿನಿಸುಗಳ ಮಳಿಗೆಗಳ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ಪೊಲೀಸರು ಹೊರಡಿಸಿರುವ ಆದೇಶದ ಜಾರಿಯನ್ನು ಸುಪ್ರೀಂ ಕೋರ್ಟ್ ಇಂದು ತಡೆಹಿಡಿದಿದೆ.
ಕನ್ವರ್ ಯಾತ್ರೆ ಮಾರ್ಗದಲ್ಲಿನ ತಿಂಡಿ-ತಿನಿಸುಗಳ ಮಳಿಗೆಗಳ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಜುಲೈ 21ರಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಪೀಠವು ಆದೇಶಕ್ಕೆ ತಡೆಹಿಡಿದಿದೆ.
ಮಳಿಗೆಗಳ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಆದೇಶವನ್ನು ಪ್ರಾರಂಭದಲ್ಲಿ ಮುಜಾಫರ್ನಗರದಲ್ಲಿ ಮಾತ್ರ ಜಾರಿಗೊಳಿಸಲಾಗಿತ್ತು. ನಂತರ ಯುಪಿ ಸರ್ಕಾರ ಈ ಆದೇಶವನ್ನು ರಾಜ್ಯದಾದ್ಯಂತ ವಿಸ್ತರಿಸಿತ್ತು.