ನವದೆಹಲಿ, ಜು 22 (DaijiworldNews/ AK): ಎಂಟು ಜನರ ಸಾವಿಗೆ ಕಾರಣವಾಗಿದ್ದ ಲಖೀಂ ಪುರ ಖೇ ರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ. ದೆಹಲಿ ಮತ್ತು ಲಖನೌಗೆ ಪ್ರವೇ ಶಿಸದಂ ತೆ ಆಶಿಶ್ ಮಿಶ್ರಾಗೆ ನಿರ್ಬಂ ಧ ವಿಧಿಸಲಾಗಿದೆ. ಜತೆಗೆ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.
ವಿಚಾರಣೆಗೆ ಹಾಜರಾಗುವ ಎಲ್ಲ ಸಾಧ್ಯತೆಗಳನ್ನು ಪರಿಗಣಿಸಿ ಆರೋಪಿಗೆ ಜಾಮೀನಿ ಮಂಜೂರು ಮಾಡಲಾಗಿದೆ. 117 ಸಾಕ್ಷಿಗಳ ಪೈಕಿ ಏಳು ಮಂದಿಯನ್ನು ಮಾತ್ರ
ಇದುವರೆಗೆ ವಿಚಾರಣೆಗೆ ಒಳಪಡಿಸಲಾಗಿದೆ. ಉಳಿದ ಸಾಕ್ಷಿಗಳ ಹೇಳಿಕೆ ದಾಖಲಿಸುವ ಮೂಲಕ ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.