ಬೆಂಗಳೂರು, ಜು.22(DaijiworldNews/AA): ಅಸಹಜ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ.
ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಒಂದು ಪ್ರಕರಣದಲ್ಲಿ ಮಾತ್ರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ದಾಖಲಾದ ಬಳಿಕ ಜೂನ್ 23 ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು.