ನವದೆಹಲಿ, ಜು 23 (DaijiworldNews/MS): ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದು ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ ಘೋಷಿಸಿದ್ದಾರೆ.
ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳು ದೊಡ್ಡ ಸಹಾಯವನ್ನು ಪಡೆಯಲಿದ್ದಾರೆ.
ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದನೀಡಲಾಗುವುದು.
ಈ ವೇತನವನ್ನು ನೇರ ಲಾಭ ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. EPFO ನಲ್ಲಿ ನೋಂದಾಯಿಸಿದ ಜನರು ಈ ಸಹಾಯವನ್ನು ಪಡೆಯುತ್ತಾರೆ. ಅರ್ಹತೆಯ ಮಿತಿಯು ತಿಂಗಳಿಗೆ 1 ಲಕ್ಷ ರೂ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ.