ಬೆಂಗಳೂರು, 25 (DaijiworldNews/ AK): ಕರ್ನಾಟಕದಲ್ಲಿ ನಿರಂತರ ಮಳೆಗೆ ಹಲವು ಜಲಾಶಯಗಳು ಭರ್ತಿ ಆಗಿವೆ. ಭಾರೀ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆಘೋಷಣೆ ಮಾಡಲಾಗಿದೆ. ಕೊಡಗು, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ರಜೆ ನೀಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವ್ಯಾಪಕ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಡಿಸಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. ನಿನ್ನೆ ಜಿಲ್ಲೆಯ ಎಂಟು ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ್ದರು. ನಾಳೆಯೂ ಹೆಚ್ಚಿನ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಕ್ಕಳಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.ಹಾವೇರಿ ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯಿತ್ತಿದೆ. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ ಘೋಷಿಸಲಾಗಿದೆ. ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿ ಮಾತ್ರ ರಜೆ ನೀಡಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಪ್ರಕಟಿಸಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಜಿಲ್ಲೆಯ 9 ತಾಲೂಕಿನ ಶಾಲೆ, ಕಾಲೇಜಿಗೆ ನಾಳೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಾಟ್ಕಳ, ದಾಂಡೆಲಿ, ಜೋಯಿಡಾ, ಹಲಿಯಾಳ ಮತ್ತು ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜ್ಗೆ ರಜೆ ನೀಡಲಾಗಿದೆ.