ಬೆಂಗಳೂರು, ಜು.26(DaijiworldNews/AA): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಕೇಸ್ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
ಕಳೆದ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನವಲಗುಂದ ಪೊಲೀಸ್ ಠಾಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾ ಮಾಡಿತ್ತು. ಜಮೀರ್ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಕೆ ಮಾಡಿದ್ದರು. ಅದನ್ನು ಪರಿಶೀಲಿಸಿದ ನ್ಯಾ. ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿತ್ತು.