ಮದ್ದೂರು, ಆ.6(DaijiworldNews/AK): ವಾಲ್ಮೀಕಿ ನಿಗಮದಲ್ಲಿ 89 ಕೋಟಿ ರೂ. ಹಗರಣವಾಗಿರುವುದು ನಿಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಅವರು ನೈತಿಕತೆ ಇದ್ದರೆ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.
ಮೈಸೂರು ಚಲೋ 4ನೇ ದಿನದ ಪಾದಯಾತ್ರೆ ಆರಂಭಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರದ ಹಗರಣಗಳು ಹಾಗೂ ಪೊಲೀ ಸ್ ಅಧಿಕಾರಿಗಳ ಆತ್ಮಹತ್ಯೆ ಸಂಗತಿಗಳನ್ನು ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು ಮುಡಾದಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ 14 ನಿವೇ ಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ನಿಯ ಹೆಸರಿನಲ್ಲಿ ಪಡೆದುಕೊಂಡಿದ್ದಾರೆ. ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರ ಪಕ್ಷಕ್ಕೆ ಜನರು 136 ಸ್ಥಾನಗಳನ್ನು ಕೊಟ್ಟಿದ್ದಾರೆ. ಈ
ಹಗರಣಗಳಿಂದಾಗಿ ಈಗ ಜನರೇ ಛೀಮಾರಿ ಹಾಕುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾ ರವು ನೆರೆಯ ತಮಿಳುನಾಡು ಸರ್ಕಾರಕ್ಕೆ ಮೇ ಕೆದಾಟು ಯೋ ಜನೆ ಬಗ್ಗೆ ಯಾವುದೇ ತಗಾದೆ ತೆಗೆಯದಂತೆ ಪತ್ರ ಬರೆದು ಒಪ್ಪಿಗೆ ಪಡೆದರೆ ಕೇಂ ದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಮುಂ ದೆ ಬಂ ದು 15 ದಿನಗಳಲ್ಲಿ ಮೇ ಕೆದಾಟುಯೋ ಜನೆಗೆ ಕೇಂದ್ರ ಸರ್ಕಾ ರದಿಂದ ಅನುಮತಿ ಕೊಡಿಸುತ್ತಾರೆ ಎಂದರು.