ಬೆಂಗಳೂರು, ಆ.08(DaijiworldNews/AK): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇ ಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಈ ಕುರಿತಾದ ದೂರನ್ನು ಮೈಸೂರಿನ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಶಾಸಕರು-ಸಂ ಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇ ಷ ನ್ಯಾಯಾಲಯದಲ್ಲಿ ಗುರುವಾರ ದಾಖಲಿಸಿದ್ದಾರೆ.
ದೂರನ್ನು ಪಡೆದಿರುವ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದು ಪ್ರಕರಣ ನಾಳೆ ವಿಚಾರಣೆಗೆ ಬರುವ ನಿರೀಕ್ಷೆ ಇದೆ.