ನವದೆಹಲಿ, ಆ.13(DaijiworldNews/AA): ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುವ ಪ್ರಕರಣಕ್ಕೆ ಸಂಬAಧಿಸಿದAತೆ ಪತಂಜಲಿ ಆಯುರ್ವೇದ ಮತ್ತು ಅದರ ಸಂಸ್ಥಾಪಕ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ನ್ಯಾ. ಹಿಮಾ ಕೊಹ್ಲಿ ಮತ್ತು ನ್ಯಾ. ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿದೆ. ಇದೀಗ ತೀರ್ಪು ನೀಡಿರುವ ಪೀಠವು ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿದೆ.
ಕಂಪನಿ ಮತ್ತು ಅದರ ಸಂಸ್ಥಾಪಕ ನ್ಯಾಯಾಲಯದ ಆದೇಶದ ಉಲ್ಲಂಘನೆ ಹಿನ್ನಲೆ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತ್ತು. ಇದಾದ ಬಳಿಕ ರಾಮ್ದೇವ್ ಅವರು ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ್ದರು.
ಕೋವಿಡ್-19 ವ್ಯಾಕ್ಸಿನೇಷನ್ ಮತ್ತು ಆಧುನಿಕ ಔಷಧದ ವಿರುದ್ಧ ಪತಂಜಲಿ ಟೀಕೆ ಮಾಡಿತ್ತು. ತಮ್ಮ ಉತ್ಪನ್ನಗಳು ಕೊರೊನಾ ಗುಣಪಡಿಸುತ್ತದೆ ಎಂದು ಪತಂಜಲಿ ಜಾಹೀರಾತು ನೀಡಿತ್ತು. ಈ ಜಾಹೀರಾತಿನ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿದ ಅರ್ಜಿಯ ಆಧಾರದ ಮೇರೆಗೆ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿತ್ತು.