ಅಯೋಧ್ಯೆ, ಆ.14(DaijiworldNews/AA): ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್ ದೀಪಗಳನ್ನು ಕಳವು ಮಾಡಲಾಗಿದೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮ ಪಥ ಮೇಲೆ ಈ ದೀಪಗಳನ್ನು ಅಳವಡಿಸಲಾಗಿತ್ತು.
ಈ ಬಗ್ಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಸ್ಥಾಪಿಸಿದ ಯಶ್ ಎಂಟರ್ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ ಸಂಸ್ಥೆಯ ಪ್ರತಿನಿಧಿಯು ಆಗಸ್ಟ್ 9 ರಂದು ದೂರು ದಾಖಲಿಸಿದ್ದಾರೆ. ಆ ಬಳಿಕ ಕಳ್ಳತನ ವಿಷಯ ಬೆಳಕಿಗೆ ಬಂದಿದೆ.
ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ದೀಪಗಳನ್ನು ಅಳವಡಿಸಲಾಗಿದೆ. ಮಾರ್ಚ್ 19 ರವರೆಗೆ ಎಲ್ಲಾ ದೀಪಗಳು ಇದ್ದವು ಆದರೆ ಮೇ 9 ರಂದು ಪರಿಶೀಲನೆಯ ನಂತರ ಕೆಲವು ದೀಪಗಳು ಕಾಣೆಯಾಗಿರುವುದು ಕಂಡುಬAದಿದೆ. ಇದುವರೆಗೆ ಸುಮಾರು 3,800 ದೀಪಗಳು ಬಿದಿರಿನ ದೀಪಗಳು ಮತ್ತು 36 ಪ್ರೊಜೆಕ್ಟರ್ ದೀಪಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.