ಬೆಂಗಳೂರು, ಆ.14(DaijiworldNews/AA): ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಬದಲಾಯಿಸುವುದಿಲ್ಲ ಹಾಗೂ ಕತ್ತರಿ ಹಾಕಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಇದು ಸುಳ್ಳು ಸುದ್ದಿಯಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಕೆಲವೆಡೆ ಆದಾಯ ಹೆಚ್ಚಳ ಇರುವವರು ಕೂಡ ಗ್ಯಾರಂಟಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ನಾವು ಪರಿಶೀಲಿಸುತ್ತೇವೆ. ಶಾಸಕರಿಗೆ, ಸಚಿವರಿಗೆ ಅನುದಾನ ದೊರೆಯುತ್ತಿಲ್ಲ ಎಂಬುದು ಸುಳ್ಳು ಎಂದರು.