ವಿಜಯಪುರ, ಆ.15 (DaijiworldNews/TA): ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲೋದಿಲ್ಲ. ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಇರುತ್ತದೆ ಎಂಬುವುದಾಗಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತಿದ್ದೇವೆ. 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅನವಶ್ಯಕವಾಗಿ ಶ್ರೀಮಂತರಿಗೆ ಬಿಪಿಎಲ್ ಏಕೆ ಎಂಬ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತದೆ ಎಂದರು.