ನವದೆಹಲಿ,ಆ , 16, (DaijiworldNews/AK) :ವಿನೇಶ್ ಫೋಗಟ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್ ಪ್ರವೇ ಶಿಸಿದ ಭಾರತದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದು ನಮ್ಮ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ಯಾರಿಸ್ ಒಲಿಂಪಿಕ್ ಕೂಟದಲ್ಲಿ ಸ್ಪರ್ಧಿಸಿ ತವರಿಗೆ ಮರಳಿರುವ ಭಾರತದ ಕ್ರೀ ಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋ ದಿ ಅವರು ತಮ್ಮ ನಿವಾಸದಲ್ಲಿ ಸಂವಾದ ನಡೆಸಿದರು.ಈ ವೇಳೆ ವಿನೇಶ್ ಫೋ ಗಟ್ ಸಾಧನೆ ಕುರಿತು ಪ್ರಧಾನಿ ಮೋ ದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಹಿಳೆಯರ 50 ಕೆ.ಜಿ. ಕುಸ್ತಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಅವರು ದೇಹತೂಕದಲ್ಲಿ 100 ಗ್ರಾಂ ಹೆಚ್ಚಾಗಿದ್ದ ಕಾರಣಕ್ಕೆ ಅನರ್ಹ ಗೊಂಡಿದ್ದರು. ಇದರಿಂದ ಭಾರತಕ್ಕೆ ಪದಕ ನಷ್ಟವಾಗಿತ್ತು. ಇದರಿಂದ ವಿನೇಶ್ ಆಘಾತವಾಗಿತ್ತಲ್ಲದೆ ಕ್ರೀಡಾಭಿಮಾನಿಗಳಲ್ಲಿ ನಿರಾಸೆಯನ್ನುಂಟು ಮಾಡಿತ್ತು.
ವಿನೇಶ್ ಪರ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಅಭಿಯಾನ ನಡೆದಿತ್ತು. ಬಳಿಕ ಕನಿಷ್ಠ ಬೆಳ್ಳಿ ಪದಕ ನೀಡಬೇ ಕು ಎಂಬ ವಿನೇ ಶ್ ಅವರ ಮೇ ಲ್ಮನವಿಯನ್ನು ಕ್ರೀ ಡಾ ಮಧ್ಯಸ್ಥಿಕೆ ನ್ಯಾಯಮಂಡಳಿ (ಸಿಎಎಸ್) ತಿರಸ್ಕರಿಸಿತ್ತು.