ನವದೆಹಲಿ, ಆ.24(DaijiworldNews/TA): ಶಿಖರ್ ಧವನ್ ಶನಿವಾರ ದೇಶಿಯ ಮತ್ತು ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು. ಎಡಗೈ ಬ್ಯಾಟರ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶವನ್ನು ಪೋಸ್ಟ್ ಮಾಡುವ ಮೂಲಕ ವಿದಾಯ ಹೇಳಿದರು.
ಪೋಸ್ಟ್ ನಲ್ಲಿ ಎಲ್ಲಾ ರೀತಿಯ ಕ್ರಿಕೆಟ್ನಿಂದ ನಿವೃತ್ತಿಯಾಗುವ ನಿರ್ಧಾರವನ್ನು ಪ್ರಕಟಿಸಿದರು. ಧವನ್ ಕೊನೆಯ ಬಾರಿಗೆ 2022 ರಲ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ್ದರು. ಧವನ್ ತಮ್ಮ ವೃತ್ತಿಜೀವನದುದ್ದಕ್ಕೂ ಪಡೆದ ಪ್ರೀತಿ ಮತ್ತು ಬೆಂಬಲಕ್ಕಾಗಿ ತಮ್ಮ ಅಭಿಮಾನಿಗಳು ಮತ್ತು ಸಂಘಗಳಿಗೆ ಧನ್ಯವಾದಗಳನ್ನು ಸಮರ್ಪಿಸುವ ಸಲುವಾಗಿ X ಖಾತೆಯಲ್ಲಿ ಸುದೀರ್ಘ ವೀಡಿಯೊ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ಮೊದಲಿಗೆ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತಿದ್ದೇನೆ. ಭಾರತ ತಂಡವನ್ನು ಸೇರಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಸೇರಿದ ನಂತರ ಇಡೀ ತಂಡ, ಕುಟುಂಬ, ಅಭಿಮಾನಿಗಳಿಂದ ಬೆಂಬಲ ಸಿಕ್ಕಿತು. ಈಗ ವಿದಾಯ ಹೇಳುವ ಸಮಯ ಬಂದಿದೆ. ಎಂದು ಭಾವುಕ ನುಡಿಗಳನ್ನಾಡಿದ್ದಾರೆ.
ಜೊತೆಗೆ ನನ್ನ ದೇಶಕ್ಕಾಗಿ ನಾನು ಸಾಕಷ್ಟು ಆಡಿದ್ದೇನೆ ಎಂಬ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ ಮತ್ತು ನನ್ನ ಎಲ್ಲಾ ಅಭಿಮಾನಿಗಳಿಗೆ ನಿಜವಾಗಿಯೂ ನಾನು ಕೃತಜ್ಞನಾಗಿದ್ದೇನೆ ಎಂದು ತಿಳಿಸಿದರು.