ಢಾಕಾ, ಆ.26(DaijiworldNews/AA): ಕೊಲೆ ಪ್ರಕರಣದ ಆರೋಪಿಯಾಗಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಅವರನ್ನು ತಕ್ಷಣ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಬ್ಯಾನ್ ಮಾಡುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಪ್ರಸ್ತುತ ಶಕೀಬ್ ಪಾಕಿಸ್ತಾನ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯ ಭಾಗವಹಿಸಿದ್ದಾರೆ. ಈ ಮಧ್ಯೆ ಬಾಂಗ್ಲಾ ರ್ಯಾಲಿಯಲ್ಲಿ ಹತ್ಯೆಯಾದ ರುಬೆಲ್ ಎಂಬಾತನ ತಂದೆ ರಫೀಕುಲ್ ಇಸ್ಲಾಂ ಪರ ವಕೀಲರು, ಶಕೀಬ್ ಅವರನ್ನು ಬ್ಯಾನ್ ಮಾಡುವಂತೆ ಹೇಳಿದ್ದಾರೆ. ಜೊತೆಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ನೋಟಿಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ವಕೀಲರು ಶಕೀಬ್ ಅವರನ್ನ ಕೂಡಲೇ ಕ್ರಿಕೆಟ್ನಿಂದ ನಿಷೇಧಿಸುವಂತೆ ಮಂಡಳಿಗೆ ನೋಟಿಸ್ ನೀಡಿದ್ದಾರೆ. ಆದರೆ ಸದ್ಯ ಪಾಕಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯ ಮುಗಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಸಿಬಿ ಅಧ್ಯಕ್ಷ ಫಾರುಕ್ ಅಹ್ಮದ್ ಮಾಹಿತಿ ನೀಡಿದ್ದಾರೆ.